Friday, December 26, 2008

ಭೈರಪ್ಪನವರ ಕಾದಂಬರಿಗಳಲ್ಲಿ ಸೂಪರ್ ಮೇಲ್ ಫ್ಯಾಂಟಸಿ

ಸಾಮಾನ್ಯವಾಗಿ ಇದುವರೆಗೆ ಕುವೆಂಪು, ಬೇಂದ್ರೆ, ಶಿಶುನಾಳ ಷರೀಫ, ಮುಂತಾದವರ ಕ್ಲಿಷ್ಟ ಕಾವ್ಯಗಳ ಕುರಿತ ವಿಮರ್ಶಾತ್ಮಕ ವಿವರಣೆಯನ್ನು ಅತ್ಯಂತ ಸಾಮಾನ್ಯ ಓದುಗನಿಗೂ ಅರ್ಥವಾಗುವಂತೆ ಸರಳ ಶೈಲಿಯಲ್ಲಿ ಕೊಡುತ್ತಿದ್ದ ಕನ್ನಡದ ಹಿರಿಯ ಬ್ಲಾಗಿ, ಭಾಷಾ ತಜ್ಞ, ಎಲ್ಲರ ಪ್ರೀತಿಯ ಕಾಕಾ, ಧಾರವಾಡದ ಸುನಾಥರು, ಈ ಬಾರಿ ಭೈರಪ್ಪನವರ ಕಾದಂಬರಿಗಳಲ್ಲಿನ Super Male Fantasyಯ ಬಗ್ಗೆ ಅತ್ಯಂತ ಆಳವಾದ ಅಧ್ಯಯನವನ್ನು ಮಾಡಿ ಒಂದು ಲೇಖನವನ್ನು ಬರೆದಿದ್ದಾರೆ:

"...ಎಲ್ಲ ಗಂಡಸರು ತಾವು ಹೆಣ್ಣಿಗಿಂತ ಎಲ್ಲ ವಿಧದಲ್ಲಿಯೂ ಹೆಚ್ಚಿನವರು, ವಿಶೇಷತ: sexually ಹೆಚ್ಚು ಸಾಮರ್ಥ್ಯವುಳ್ಳವರು ಎಂದು ಕಲ್ಪಿಸಿಕೊಳ್ಳುತ್ತಾರೆ. ಆದರೆ, ನಿಸರ್ಗದ ಯೋಜನೆ ಅಥವಾ ವಿಧಾನ ಹಾಗಿಲ್ಲ.
ಮಾನವಕುಲದಲ್ಲಿ ಗಂಡು ಹಾಗೂ ಹೆಣ್ಣುಗಳ ಪ್ರಮಾಣ ಸುಮಾರಾಗಿ ಸರಿಸಮವಾಗಿದೆ. ಮಾನವಕುಲದಲ್ಲಿ ಹೆಚ್ಚಿಗೆ ಸಂತಾನವಾಗಬೇಕಾದರೆ, ರತಿಕ್ರಿಯೆಯಲ್ಲಿ ತೊಡಗಿದ ಗಂಡಸಿನ ಕ್ರಿಯೆ ಶೀಘ್ರಮುಕ್ತಾಯ ಕಾಣಬೇಕು ; ಹಾಗೂ ಹೆಣ್ಣಿನಲ್ಲಿ ರತಿಕ್ರಿಯೆ ಬಲಶಾಲಿ ಹಾಗೂ ನಿಧಾನವಾಗಿರಬೇಕು so that she can receive more & more males. ಇದು ನಿಸರ್ಗದ ಸಂವಿಧಾನ..

"ಆದರೆ ಮಾನವಕುಲದ ಅಹಂಕಾರಿ ಗಂಡುಜಾತಿಗೆ ಈ ನಿಸರ್ಗಯೋಜನೆ ಅಪಥ್ಯವಾಗಿದೆ. ಆದುದರಿಂದ ಆತ ಪ್ರಕೃತಿಯ ಈ ವಿಧಾನವನ್ನು ಮನಸಾ ಒಪ್ಪಿಕೊಳ್ಳಲಾರದೆ ತೊಳಲಾಡುತ್ತಾನೆ. ರತಿಕ್ರಿಯೆಯನ್ನು ದೀರ್ಘಗೊಳಿಸಲು ಕೃತ್ರಿಮ ವೈದ್ಯಕೀಯ ವಿಧಾನಗಳಿಗೆ ಶರಣಾಗುತ್ತಾನೆ. ಅದು ಸಾಧ್ಯವಾಗದಾಗ ತನ್ನ ಸಾಮರ್ಥ್ಯವನ್ನು fantasyಯಲ್ಲಿ ಕಾಣಬಯಸುತ್ತಾನೆ. ಈ fantasyಯು ಕೇವಲ ವೈಯಕ್ತಿಕ ಹಗಲುಗನಸುಗಳಿಗೆ ಸೀಮಿತವಾಗದೆ, ಸಾಹಿತ್ಯದಲ್ಲಿಯೂ ಸಹ ವ್ಯಕ್ತಗೊಳ್ಳುತ್ತಲೇ ಇದೆ. ಸಾಹಿತ್ಯದಲ್ಲಿ ವ್ಯಕ್ತವಾಗುವ ಇಂತಹ fantasyಯನ್ನು super- male- fantasy ಎಂದು ಕರೆಯಬಹುದು..."
ಪೂರ್ತಿ ಓದಿಗೆ ಭೇಟಿ ಕೊಡಿ: ಸಲ್ಲಾಪ

2 comments:

sunaath said...

ಮೋಟುಗೋಡೆಯ ಮರೆಯಲ್ಲಿ ಸ್ವಲ್ಪ ಜಾಗ ಕೊಟ್ಟಿದ್ದಕ್ಕೆ thanks!

Parisarapremi said...

[ಸುನಾಥ್] ನೀವು ಸೀನಿಯರ್ ಬಿಡಿ.. ಮೋಟುಗೋಡೆಯ ವಿಷಯದಲ್ಲಿ... ;-)